ನವದೆಹಲಿ,ಮಾರ್ಚ್,29,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲು ಕೇಂದ್ರ ಚುನಾವಣಾ ಆಯೋಗ ಸುದ್ಧಿಗೋಷ್ಠಿ ನಡೆಸುತ್ತಿದೆ.
ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಸುದ‍್ಧಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಒಟ್ಟು 58, 282 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗುತ್ತದೆ ಒಂದೊಂದು ಮತಗಟ್ಟೆಗೆ 883ಮತದಾರರು. ನಗರ ಪ್ರದೇಶದಲ್ಲಿ 24,063 ಗ್ರಾಮೀಣ ಪ್ರದೇಶದಲ್ಲಿ 34 219 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ.
80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗುತ್ತಿದೆ. ಮೊದಲೇ ಆಯೋಗದಲ್ಲಿ ನೋಂದಾಯಿಸಿಕೊಳ್ಳಬೇಕು. ಜೇನುಕುರುಬ ಕಾಡುಕುರುಬ ಮತದಾರರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
Key words: State- Assembly –Elections-58, 282 polling- booths