ಬೆಂಗಳೂರು,ಮಾರ್ಚ್,29,2023(www.justkannada.in): ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಮೇ 10 ಮತದಾನ ಮತ್ತು ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು, ಏಪ್ರಿಲ್ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷ ವಿಕಲಚೇತನರು ಮನೆಯಿಂದಲೇ ಮತದಾನ ಮಾಡಬಹುದು. ಮನೆಯಿಂದ ಮತ ಹಾಕುವವರಿಗೆ ಫಾರಂ 12ರಡಿ ಅನುಮತಿ ನೀಡಲಾಗುತ್ತೆ. ವಿಕಲಚೇತನರು ಇರುವ ಮನೆಗೆ ಚುನಾವಣಾ ಸಿಬ್ಬಂದಿ ತೆರಳಲಿದ್ದಾರೆ. ನಮ್ಮ ಸಿಬ್ಬಂದಿ ಜತೆ ಪಕ್ಷಗಳ ಪ್ರತಿನಿಧಿಗಳು ಕೂಡ ಹೋಗುತ್ತಾರೆ. ವಿಕಲಚೇತನರ ಮತದಾನದ ವೇಳೆ ಗೌಪ್ಯತೆ ಕಾಪಾಡಲಾಗುತ್ತೆ. ಈ ಬಾರಿ ರಾಜ್ಯ ಮತದಾರರ ಪಟ್ಟಿಗೆ 3,021 NRIಗಳ ಹೆಸರು ಸೇರ್ಪಡೆಯಾಗಿವೆ ಎಂದು ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಟ್ಟು 58282 ಮತಗಟ್ಟೆಗಳಿವೆ. ಕೋವಿಡ್ ಬಾಧಿತರಿಗೆ ಪ್ರತ್ಯೇಕ ಮತಗಟ್ಟೆ ಇರಲಿದೆ. 80 ವರ್ಷ ಮೇಲ್ಪಟ್ಟವರು, ದಿವ್ಯಾಂಗರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯ. ಇವಿಎಂ ಬ್ಯಾಲೆಟ್ ಪೇಪರ್ ನಲ್ಲಿ ಅಭ್ಯರ್ಥಿಗಳ ಭಾವಚಿತ್ರವಿರಲಿದೆ. ನೋಟಾ ಆಯ್ಕೆಯ ವ್ಯವಸ್ಥೆ ಇದೆ ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದರು.
Key words: State -Assembly –Elections-add name – voter list- till-april 11