ಬೆಂಗಳೂರು,ಮೇ,22,2023(www.justkannada.in): ಇಂದಿನಿಂದ ಮೂರು ದಿನಗಳ ಕಾ ರಾಜ್ಯ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಸದಸ್ಯರ ಪ್ರಮಾಣವಚನ ಸ್ವೀಕಾರ ಮತ್ತು ಸ್ಪೀಕರ್ ಆಯ್ಕೆ ಹಿನ್ನೆಲೆಯಲ್ಲಿ ಅಧಿವೇಶನ ಮಹತ್ವ ಪಡೆದುಕೊಂಡಿದೆ.
ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ಆರ್.ವಿ ದೇಶಪಾಂಡೆ ಅವರು ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ.
ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಈ ತಿಂಗಳು 23ರ ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸುವ ಸಾಧ್ಯತೆ ಇದೆ.
Key words: State -assembly -session -three days – today.