ಬೆಂಗಳೂರು,ಮಾರ್ಚ್,7,2025 (www.justkannada.in): ಇಂದು ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು ಬಜೆಟ್ ನಲ್ಲಿ ಕೃಷಿಗೆ ಹೆಚ್ಚು ನೀಡಿರುವುದಾಗಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲ 16ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಕೃಷಿವಲಯಕ್ಕೆ ಈ ಬಾರಿ 51,339 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ.
ಕಳೆದ ವರ್ಷದಲ್ಲಿ ಶೇ.-4.9 ರಷ್ಟು ಬೆಳವಣಿಗೆ ದಾಖಲಾಗಿದ್ದ ಕೃಷಿ ವಲಯವು, 2024-25ರಲ್ಲಿ ಶೇ. 4ರಷ್ಟು ಬೆಳವಣಿಗೆ ಸಾಧಿಸುವ ಮೂಲಕ ಚೇತರಿಕೆ ಕಂಡಿದ್ದು, ದೇಶದ ಕೃಷಿ ವಲಯದ ಬೆಳವಣಿಗೆ ಶೇ.3.8ಕ್ಕಿಂತ ಹೆಚ್ಚಾಗಿದೆ. ಮುಂಗಾರು ಬಿತ್ತನೆಗೆ ಸರ್ಕಾರದ ಸಕಾರಾತ್ಮಕ ಕ್ರಮಗಳೊಂದಿಗೆ ಉತ್ತಮ ಮುಂಗಾರು ಮತ್ತು ಜಲಾಶಯಗಳು ಭರ್ತಿಯಾಗಿದ್ದರಿಂದ 2024-25ನೇ ಸಾಲಿನಲ್ಲಿ ಕೃಷಿ ವಲಯದಲ್ಲಿ ಒಳ್ಳೆಯ ಬೆಳವಣಿಗೆ ಸಾಧಿಸಲು ಕಾರಣವಾಗಿದೆ. ರಾಜ್ಯ ಸರ್ಕಾರವು ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಕಳೆದ ವರ್ಷ 44,000 ಕೋಟಿ ರೂ. ನೀಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಒಟ್ಟು 51,339 ಕೋಟಿ ರೂ. ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
Key words: Agriculture Department, State Budget, Rs. 51,339 crore, grant