ರಾಜ್ಯ ಬಜೆಟ್: ಮಲ್ಟಿಫ್ಲೆಕ್ಸ್ ​ಗಳಲ್ಲಿ ಸಿನಿಮಾ ಟಿಕೆಟ್ ​ಗೆ ಏಕರೂಪದ ದರ ನಿಗದಿ

ಬೆಂಗಳೂರು, ಮಾರ್ಚ್‌, 7,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಕರ್ನಾಟಕ ಬಜೆಟ್‌ ಮಂಡಿಸಿದ್ದು, ಸಿನಿಮಾ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್‌ನಲ್ಲಿ ಮಲ್ಟಿಪ್ಲೆಕ್ಸ್‌ ನಲ್ಲಿ ಏಕರೂಪದ ಟಿಕೆಟ್ ದರ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ಕರ್ನಾಟಕದ ಯಾವುದೇ ಮಲ್ಟಿಪ್ಲೆಕ್ಸ್‌ನಲ್ಲಿ ಸಿನಿಮಾ ಟಿಕೆಟ್ ದರ 200 ರೂಪಾಯಿ ಆಗಿರಲಿದೆ.

ಈ ಕುರಿತು ಬಜೆಟ್ ನಲ್ಲಿ ಉಲ್ಲೇಖಿಸಿರುವ ಸಿಎಂ ಸಿದ್ದರಾಮಯ್ಯ, ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್​ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Key words: State Budget, Multiflexes, uniform rate , cinema ticket