ಉಡುಪಿ,ಜನವರಿ,19,2021(www.justkannada.in): ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದರು.
ಉಡುಪಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿನ ಹಣಕಾಸಿನ ಇತಿಮಿತಿ ನೋಡಿಕೊಂಡು ಬಜೆಟ್ ಘೋಷಣೆ ಮಾಡಲಾಗುತ್ತದೆ. ಮಾರ್ಚ್ ಮೊದಲ ವಾರದಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ. ವಿಧಾನಮಂಡಲ ಅಧಿವೇಶನ ಶುರುವಾಗುತ್ತಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಹೇಳಿದರು.
ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ,ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು. ಇನ್ನು ಶಾಸಕ ರೇಣುಕಾಚಾರ್ಯ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ ರೇಣುಕಾಚಾರ್ಯ ಜತೆ ಮಾತುಕತೆ ನಡೆಸಿದ್ದೇವೆ. ಯಾವುದೇ ಗೊಂದಲದ ವಾತಾವರಣ ಇಲ್ಲ ಎಂದರು.
State budget in March first week – CM BSY
Udupi, Jan. 19, 2021 (www.justkannada.in): Chief Minister B.S. Yedyurappa today informed the State budget will be presented in the first week of March 2021.
Speaking to the press persons at Udupi today CM B.S. Yedyurappa said, “budget will be announced after examining the financial limitations. Budget will be presented in the first week of March. The State Government is committed for the overall development of the State,” he added.
He also informed that portfolios will be distributed to the new Ministers within the next two days.
Keywords: Chief Minister B.S. Yedyurappa/ State budget in March
Key words: state budget – presented – first week –March-CM BS Yeddyurappa.