ಬೆಂಗಳೂರು,ಜುಲೈ,19,2023(www.justkannada.in): ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ಗೆ ಕಳಿಸಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ. ಅದು ಇಂಡಿಯಾ ಅಲ್ಲ ಈಸ್ಟ್ ಇಂಡಿಯಾ ಕಂಪನಿ ಇದ್ದಂತೆ. ಮುಂದೆ ನಡೆಯಲಿರುವ ಚುನಾವಣೆಗೆ ರಾಜ್ಯ ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ಗೆ ಕಳಿಸಲಿದೆ ಎಂದು ಕಿಡಿಕಾರಿದರು.
Key words: State -Congress -collect –money-transfer- former minister- R. Ashok