ಕಲ್ಬುರ್ಗಿ,ಡಿಸೆಂಬರ್,10,2022(www.justkannada.in): ರಾಜ್ಯದಲ್ಲಿ ಬಿಜೆಪಿ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನೀಡುವ ಗೌರವ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನುಡಿದರು.
ಕಲ್ಬುರ್ಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಜನರ ಉತ್ಸಾಹ ನೋಡಿದರೇ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ನಿಷ್ಠೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಖರ್ಗೆ ಅವರಿಗೆ ಸೋನಿಯಾ, ರಾಹುಲ್ ಗಾಂಧಿ ಆಶೀರ್ವಾದವಿದೆ ಎಂದರು.
ಬಿಜೆಪಿ ಅನೈತಿಕವಾಗಿ ಸರ್ಕಾರವನ್ನ ರಚನೆ ಮಾಡಿ ಅಧಿಕಾರಕ್ಕೆ ಬಂದಿದೆ. ಶಾಸಕರನ್ನ ಖರೀದಿ ಮಾಡಿ ಸರ್ಕಾರ ರಚನೆ ಮಾಡಿದೆ. ಬೊಮ್ಮಾಯಿ ಸರ್ಕಾರ ಲಂಚದ ಕೂಪವಾಗಿದೆ. ವಿಧಾನಸೌಧದ ಗೋಡೆಗಳು ಲಂಚ ಲಂಚ ಎಂದು ಪಿಸುಗುಡುತ್ತಿವೆ. ವರ್ಗಾವಣೆ, ಪೋಸ್ಟಿಂಗ್, ಪ್ರೊಮೋಷನ್ ಗೂ ಪರ್ಸೆಂಟೇಜ್ ಕೊಡಬೇಕು. ಯಾವುದೇ ಕೆಲಸವಾಗಬೇಕು ಅಂದರೆ ಕಮಿಷನ್ ಕೊಡಬೇಕು ಎಂದು ವಾಗ್ದಾಳಿ ನಡೆಸಿದರು.
ಮಲ್ಲಿಕಾರ್ಜುನ ಖರ್ಗೆ ಅವರಿಂದ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಆದರೆ ಸಿಎಂ ಬೊಮ್ಮಾಯಿ ಸುಳ್ಳು ಹೇಳುವುದರಲ್ಲಿ ನಿಸ್ಸಿಮರಾಗಿದ್ದಾರೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.
Key words: state -Congress -should -come – power-Former CM -Siddaramaiah.