ಬೆಂಗಳೂರು, ಮಾರ್ಚ್,8,2024(www.justkannada.in): 2021ರಲ್ಲಿ ಪ್ರಾರಂಭಿಸಲಾಗಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಹಿಂದಿನ ಬಿಜೆಪಿ ಸರ್ಕಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗೆ 2021ರಂದು ಅನುಮತಿ ನೀಡಿತ್ತು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ಹಿಂಪಡೆದುಕೊಂಡಿದೆ.
ಬಿಎಂಆರ್ಸಿಎಲ್ ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ. ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಆಟೋ ,ಟ್ಯಾಕ್ಸಿ, ಮ್ಯಾಕ್ಸಿ, ಕ್ಯಾಬ್ ಚಾಲಕರು ಸಿಡಿದೆದ್ದು ಬೃಹತ್ ಹೋರಾಟ ನಡೆಸಿದ್ದರು. ಇದು ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.
Key words: state government -canceled – electric bike- taxi -scheme.