ಬೆಂಗಳೂರು,ಜುಲೈ,3,2023(www.justkannada.in): ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಜನಕಲ್ಯಾಣ, ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಶ್ರಮಿಸುತ್ತಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ಕೆಲಸ ನಿರ್ವಹಿಸುತ್ತಿದ್ದು . ಸರ್ಕಾರ ಎಲ್ಲಾ ಸಮುದಾಯಗಳ ಪರವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಕುವೆಂಪು ಅವರ ಸರ್ವಜನಾಂಗದ ಶಾಂತಿ ತೋಟ ತತ್ವದಡಿ ಕೆಲಸ ಮಾಡುತ್ತಿದ್ದೇವೆ. ಬಸವಣ್ಣ, ಸರ್ವಜ್ಞ ಸೇರಿ ಅನೇಕ ಸಂತರು ಶಾಂತಿ ತತ್ವ ಪಾಲನೆ ಮಾಡಲಾಗುತ್ತಿದೆ. ಇಂದಿರಾ ಕ್ಯಾಂಟಿನ್ ಮೂಲಕ ಸರ್ಕಾರ ಹಸಿವು ಮುಕ್ತ ಮಾಡಲಿದೆ. ಬಡವರು, ದುಡಿಯುವ ವರ್ಗದ ಜನರು, ವಲಸೆ ಕಾರ್ಮಿಕರು ಮುಂತಾದವರ ಹಸಿವು ತಣಿಸಲು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಹಣ ನೀಡಲಾಗುತ್ತೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರಿಸಿದರು.
ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ನಿರುದ್ಯೋಗಿ ಡಿಪ್ಲೋಮಾದಾರರ ಖಾತೆಗೆ ತಿಂಗಳಿಗೆ 1,500 ರೂ. ಹಾಕಲಾಗುತ್ತದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೊಡಲಾಗುತ್ತೆ. ಈ ಯೋಜನೆಯಿಂದ ಸುಮಾರು 2.14 ಕೋಟಿ ಕುಟುಂಬಕ್ಕೆ ಅನುಕೂಲ ಆಗಲಿದೆ. ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕಲಾಗುತ್ತೆ ಎಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ವಿವರಿಸಿದರು. ಹಾಗೂ ನನ್ನ ಸರ್ಕಾರ ಆಡಳಿತವನ್ನು ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತೆ. ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ ಎಂದು ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಮಕ್ಕಳಿಗೆ ಆರೋಗ್ಯ ಶಿಕ್ಷಣ ನೀಡಲು ಕ್ರಮ, ಶೈಕ್ಷಣಿಕ ಕ್ಷೇತ್ರದ ಅಭಿವೃದ್ದಿಗೆ ಸರ್ಕಾರ ಶ್ರಮಿಸಲಿದೆ. ರೈತರ ಕಲ್ಯಾಣಕ್ಕೆ ಸರ್ಕಾರ ಉತ್ತಮ ಪ್ರಯತ್ನ ಮಾಡುತ್ತಿದೆ. ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಕರ್ನಾಟಕವನ್ನ ಆರ್ಥಿಕವಾಗಿ ಮೇಲೆತ್ತಲು ಕೆಲಸ ಮಾಡಲಾಗುತ್ತಿದೆ. ಆಡಳಿತವನ್ನ ಪವಿತ್ರ ಕರ್ತವ್ಯವೆಂದು ಪರಿಗಣನೆ ಮಾಡಲಾಗಿದೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಮನೆ. ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಸರ್ಕಾರ ನಿಲ್ಲಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
-V.Mahesh kumar
Key words: State -government – Governor- Thawar Chand Gehlot- speech –session