ರಾಜ್ಯ ಸರಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಒಂಟಿ ಮನೆ ಯೋಜನೆ ಆರಂಭಿಸಲಾಗುತ್ತಿದೆ.
ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಸಿಹಿಸುದ್ದಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಒಂಟಿ ಮನೆ ಯೋಜನೆ ಆರಂಭಿಸುತ್ತಿದೆ.
ಇದಕ್ಕಾಗಿ ಶೀಘ್ರದಲ್ಲಿ ಅರ್ಜಿ ಆಹ್ವಾನಿಸಿ ನಗರದ 2 ಸಾವಿರ ಮಂದಿಗೆ ತಲಾ 5 ಲಕ್ಷ ರೂ. ಧನಸಹಾಯ ನೀಡಲಾಗುವುದು ಎಂದು ವಿಶೇಷ ಆಯುಕ್ತ ಡಾ.ರಾಮ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒಂಟಿ ಮನೆ ಯೋಜನೆಗೆ ಮತ್ತೆ ಚಾಲನೆ ನೀಡುವಂತೆ ಸೂಚಿಸಿದೆ.ಯೋಜನೆಗೆ 100 ಕೋಟಿ ರೂ. ಮೀಸಲಿಡಲಾಗಿದ್ದು, 2 ಸಾವಿರ ಫಲಾನುಭವಿಗಳಿಗೆ ತಲಾ 5 ಲಕ್ಷ ರೂ.ನಂತೆ ಧನಸಹಾಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.