ಬೆಂಗಳೂರು,ಆಗಸ್ಟ್,2,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಘೋಷಿಸಿದ್ದ ಶಕ್ತಿ ಯೋಜನೆಯನ್ನ ಜಾರಿ ಮಾಡಿದ್ದು, ಈ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಅವಕಾಶ ಮಾಡಿಕೊಡಲಾಗಿದೆ. ಈ ನಡುವೆ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯ ಹಣವನ್ನ ಸರ್ಕಾರ ಬಿಡುಗಡೆ ಮಾಡಿದೆ.
ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್ ದರ 6,87,49,57,753 ರೂ. ಆಗಿದ್ದು, ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿಯನ್ನ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್ಆರ್ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWRTC) 32.57 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ (KKRTC) 23.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾಲ್ಕು ನಿಗಮಗಳಿಗೂ ಪ್ರತೇಕವಾಗಿ ಹಣ ಬಿಡುಗಡೆ ಮಾಡಲಾಗಿದೆ.
Key words: state government – released -Shakti Yojana- funds – transport corporations.