ಬೆಂಗಳೂರು, ಆಗಸ್ಟ್ 02, 2020 (www.justkannada.in): ಕೊರೊನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧತೆ ಸಾಲದು ಎಂದು ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಷ್ಟು ದಿನ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆಂದು ಹೇಳುತ್ತಿದ್ದ ರಾಜಕೀಯ ಪಕ್ಷಗಳು ಇದೀಗ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ಎಚ್ ಡಿ ದೇವೇಗೌಡ ಕೂಡ ರಾಜ್ಯ ಸರಕಾರಕ್ಕೆ ಸಲಹೆ ನೀಡುತ್ತಲೇ ಕಿವಿಹಿಂಡಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್’ಪ್ರೆಸ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ನೀಡಿರುವ ಅವರು ಸರಕಾರಕ್ಕೆ ಚಾಟಿ ಬೀಸಿದ್ದಾರೆ. ಸರ್ಕಾರ ಏನನ್ನೂ ಮಾಡುತ್ತಿಲ್ಲ. ಈ ಎಲ್ಲದರ ನಡುವೆಯು ತಮ್ಮ ಸರ್ಕಾದ ಸಾಧನೆಗಳ ಪುಸ್ತಕವನ್ನು ಬೇರೆ ಬಿಡುಗಡೆ ಮಾಡಿದ್ದಾರೆ. ಕಳೆದ ವರ್ಷ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಸಹಾಯ ಮಾಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸಿದ್ದಾರೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಸೂಕ್ತ ಸಮಯಕ್ಕೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿಲ್ಲ. ವಲಸೆ ಕಾರ್ಮಿಕರ ಸಂಕಷ್ಟವನ್ನು ನಾವು ನೋಡಿದ್ದೇವೆ. ಅವರನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲಾಗಿಲ್ಲ ಎಂದು ದೂರಿದ್ದಾರೆ.