ಬೆಂಗಳೂರು,ಸೆಪ್ಟಂಬರ್,12,2022(www.justkannada.in): ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಶುರುವಾಗಲಿದ್ದು, ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಸಜ್ಜಾಗಿವೆ.
ಇಂದಿನಿಂದ ಸೆಪ್ಟಂಬರ್ 23ರವರೆಗೆ ಅಧಿವೇಶನ ನಡೆಯಲಿದ್ದು, ಸರ್ಕಾರ ವಿಪಕ್ಷಗಳ ನಡುವೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಸರ್ಕಾರವನ್ನ ಿಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಸಜ್ಜಾಗಿವೆ.
ರಾಜ್ಯದಲ್ಲಿ ಮಳೆ ಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ಮಳೆಯಿಂದಾಗಿ ತತ್ತರಿಸಿದ್ದು, ಬೆಂಗಳೂರಿನ ನಿರ್ವಹಣೆ, ಪ್ರವಾಹ ಪರಿಹಾರ ವಿತರಣೆಯ ಲೋಪ, 40 ಪರ್ಸೆಂಟ್ ಕಮಿಷನ್, ಪಿಎಸ್ಐ ನೇಮಕಾತಿ ಹಗರಣ, ಹೆಚ್ಚುತ್ತಿರುವ ಕೋಮು ಸಂಘರ್ಷ, ಕಾನೂನು ಸುವ್ಯವಸ್ಥೆ ಕುಸಿತ ಕುರಿತು ಸರ್ಕಾರವನ್ನ ಕಾಂಗ್ರೆಸ್ ಹಾಗೂ ಜೆಡಿಎಸ್ ತರಾಟೆ ತೆಗೆದುಕೊಳ್ಳಲಿವೆ.
Key words: State- Legislative- session – today