ಹಾವೇರಿ,ಮೇ,25,2023(www.justkannada.in): ಐದು ತಿಂಗಳಲ್ಲಿ ರಾಜ್ಯ ರಾಜಕಾರಣ ಬದಲಾಗುತ್ತೆ. ಸರ್ಕಾರ ನಿರ್ಧಾರ ನೋಡಿದ್ರೆ ಹಾಗೆ ಅನ್ನಿಸುತ್ತೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಯಿ, ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾವಣೆಯಾಗಲಿದೆ. ಈ ಸರ್ಕಾರ ಹೋಗುತ್ತಿರುವ ದಾರಿ ನೋಡಿದರೆ ಬಹಳ ದಿನ ನಡೆಯಲ್ಲ. ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರಿಗೆ ನಮ್ಮ ಕಾರ್ಯಕರ್ತರು ತಲೆಬಾಗುವ ಪ್ರಶ್ನೆ ಇಲ್ಲ. ನಾವು ನಮ್ಮ ಹಣದಿಂದ ರಾಜಕೀಯ ಮಾಡುತ್ತಿದ್ದೇವೆ. ನಾವು ತಂದ ಜನಪರ ಕಾನೂನು ರದ್ದುಪಡಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಎಲ್ಲೋ ಅಲ್ಪಸ್ವಲ್ಪ ವ್ಯತ್ಯಾಸ ಆಗಿದಕ್ಕೆ ನಾವು ಸೋತಿರಬಹುದು. ಆದರೆ ನಾವು ಸ್ವಾಭಿಮಾನ ಕಳೆದುಕೊಂಡಿಲ್ಲ. ಮೋದಿಯವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ ಮತ್ತೆ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಮತ್ತೆ ನರೇಂದ್ರ ಮೋದಿ ಅವರನ್ನ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದರು.
Key words: State –politics- will -change -five months Former CM -Basavaraja Bommai.