ಬೆಂಗಳೂರು,ಏಪ್ರಿಲ್,5,2021(www.justkannada.in): ನಿನ್ನೆವರೆಗೆ ರಾಜ್ಯಕ್ಕೆ 46 ಲಕ್ಷ ಡೋಸ್ ಕೊರೋನಾ ಲಸಿಕೆ ಬಂದಿದೆ. ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೋವಿಡ್ ಲಸಿಕೆ ಖಾಲಿಯಾಗಿತ್ತು. ಹೀಗಾಗಿ ತಕ್ಷಣ ಕೇಂದ್ರ ಸರ್ಕಾರ 15 ಲಕ್ಷ ಡೋಸ್ ಗೂ ಹೆಚ್ಚು ಲಸಿಕೆ ಕಳುಹಿಸಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.
8 ರಾಜ್ಯಗಳ ಜತೆ ಪ್ರಧಾನಿ ಮೋದಿ ಸಮಾಲೋಚನೆ ಮಾಡಿದ್ದಾರೆ. ಕೋವಿಡ್ ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನ ತಿಳಿಸಿದ್ದಾರೆ. ರಾಜ್ಯದಲ್ಲಿ ಆ ರೀತಿ ವಾತಾವರಣ ಸೃಷ್ಠಿಯಾಗೋದು ಬೇಡ ಎಂದು ಸಚಿವ ಸುಧಾಕರ್ ತಿಳಿಸಿದರು.
ರಾಜ್ಯದಲ್ಲಿ ಐಸಿಯು, ಬೆಡ್ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಬೆಡ್ ಮೀಸಲಿಗೆ ಚರ್ಚೆ ನಡೆಸಲಾಗುತ್ತಿದೆ. ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇದೆ. ಕೊರೋನಾ ನಿಯಂತ್ರಣಕ್ಕೆ ಎಲ್ಲರ ಸಹಕಾರವೂ, ಸಲಹೆ ಬೇಕು. ವಿಪಕ್ಷಗಳ ಸಲಹೆಯನ್ನೂ ಪಡೆಯುತ್ತೇವೆ. ಇಂದಿನಿಂದ ಎಲ್ಲವೂ ಅನುಷ್ಠಾನಕ್ಕೆ ಬರಲಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
Key words: state –receive-d 46 lakh doses – vaccine –Minister-Dr K Sudhakar.