ಬೆಂಗಳೂರು,ಮೇ,19,2021(www.justkannada.in): ರಾಜ್ಯಕ್ಕೆ 2 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆ ಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಈ ಕುರಿತು ಮಾಹಿತಿ ನೀಡಿದ ಸಚಿವ ಸುದಾಕರ್, 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದು ಅಗತ್ಯವಿದೆ. ಈಗಾಗಲೇ 2 ಲಕ್ಷ ಡೋಸ್ ಲಸಿಕೆ ಬಂದಿದೆ. ಮತ್ತೆ 2 ಕೋಟಿ ಡೋಸ್ ಗೆ ಆರ್ಡರ್ ಮಾಡಿದ್ದೇವೆ. ಮೊದಲ ಡೋಸ್ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲೇ ಕೊವ್ಯಾಕ್ಸಿನ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಸ್ಪುಟ್ನಿಕ್ ಲಸಿಕೆ ಉತ್ಪಾದನೆಯನ್ನ ಮಾಡಲಾಗುತ್ತದೆ. ರಾಜ್ಯಕ್ಕೆ ಆದಷ್ಟು ಬೇಗ ಲಸಿಕೆ ಸಿಗುವ ವಿಶ್ವಾಸವಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
Key words: state – received 2 lakh -doses -covaccine -Minister – Dr. K. Sudhakar.