ಮೈಸೂರು, ಅಕ್ಟೋಬರ್,2,2024 (www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2024 ಚಾಲನೆಗೆ ಒಂದು ದಿನ ಬಾಕಿ ಇದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮಧ್ಯೆ ಖ್ಯಾತ ಶಹನಾಯ್ ವಾದಕ ಪಂಡಿತ್ ಬಸವರಾಜ ಭಜಂತ್ರಿ ಹೆಡಿಗ್ಗೊಂಡ ಅವರಿಗೆ 2024-25ರ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಕಟವಾಗಿದೆ.
ಕನ್ನಡ ಮತ್ತು ಸಂಸ್ಕೃತ ಇಲಾಖೆಯು ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಕಟ ಮಾಡಿದ್ದು, ನಾಳೆ(ಅಕ್ಟೋಬರ್ 3) ಅರಮನೆ ಮುಂಭಾಗ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಸರಾ ಉದ್ಘಾಟಕ ಹಂಪಾ ನಾಗರಾಜಯ್ಯ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಬಸವರಾಜ ಭಜಂತ್ರಿ ಅವರು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಹೆಡಿಗ್ಗೊಂಡ ಗ್ರಾಮದ ತಿರುಕಪ್ಪ ಹಾಗು ಸಾವಿತ್ರಮ್ಮ ದಂಪತಿಯ ಪುತ್ರರಾಗಿದ್ದಾರೆ. ಪಂ.ಶ್ರೀ.ಬಸವರಾಜ ಭಜಂತ್ರಿ ಅವರು ಶಹನಾಯಿ ರಾಜ’ ಎಂದು ಗುರುತಿಸಿಕೊಂಡಿದ್ದಾರೆ.
Key words: State Sangeet Vidwan Award, Pandit Basavaraja Bhajantri