ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ : ಸಚಿವ ಸುರೇಶ್ ಕುಮಾರ್

ಬೆಂಗಳೂರು,ಡಿಸೆಂಬರ್,24,2020(www.justkannada.in) : ಶಾಲೆ ಆರಂಭಿಸುವುದಕ್ಕೆ ನಾನು ಯಾವುದೇ ಹಠ ಹಿಡಿದಿಲ್ಲ. ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.Teachers,solve,problems,Government,bound,Minister,R.Ashok

ನಾವ್ಯಾರೂ ವೈಯಕ್ತಿಕ ಪ್ರತಿಷ್ಠೆಗಾಗಿ ಕೆಲಸವನ್ನು ಮಾಡುತ್ತಿಲ್ಲ. ಆರೋಗ್ಯ ಶಿಕ್ಷಣ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡುತ್ತಿದೆ. ನಾವು ಅತ್ಯಂತ ಸಮನ್ವಯತೆಯಿಂದ ಕೆಲಸ ಮಾಡುತ್ತಿದ್ದೇವೆ. ಶಿಕ್ಷಣ, ಆರೋಗ್ಯ ಇಲಾಖೆಯ ನಡುವೆ ಹೊಂದಾಣಿಕೆ ಇದೆ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡ್ತಿದ್ದೇವೆ ಎಂದರು. State-start-school-government-Not-prestige- Minister-Suresh Kumar

ಸಂಕ್ರಾಂತಿ ಬಳಿಕ ಶಾಲೆ ಆರಂಭಿಸಲಿ ಎಂಬ ಎಚ್.ವಿಶ್ವನಾಥ್ ಸಲಹೆಗೆ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು, ಎಂ ಎಲ್ ಸಿ ಎಚ್.ವಿಶ್ವನಾಥ್ ಶಿಕ್ಷಣ ಸಚಿವರಾಗಿದ್ದರು. ಅವರಿಗೆ ಅಭಿಪ್ರಾಯ ತಿಳಿಸುವುದಕ್ಕೆ ಸ್ವಾತಂತ್ರ್ಯಯಿದೆ. ಅವರ ಸಲಹೆಗಳನ್ನು ಸ್ವೀಕರಿಸುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

key words : State-start-school-government-Not-prestige- Minister-Suresh Kumar