ಕೊರೋನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿ- ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ

ಬೆಂಗಳೂರು,ಜನವರಿ,28,2021(www.justkannada.in): ಕೊರೋನಾ ವಿರುದ್ಧ ರಾಜ್ಯದ ಜನರು ಹೋರಾಡಿದ್ದಾರೆ, ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.jk

ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು ಇಂದು ಜಂಟಿ ಅಧಿವೇಶನ ಉದ್ಧೇಶಿಸಿ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು, ಕೊರೋನಾ ವಿರುದ್ಧದ ಹೋರಾಟದಲ್ಲಿ ಸರ್ಕಾರ ಯಶಸ್ವಿಯಾಗಿದೆ.  ಸರ್ಕಾರದ ನಿಯ,ಮಗನ್ನ ಜನರು ಅಚ್ಚುಕಟ್ಟಾಗಿ ಪಾಲಿಸಿದ್ದಾರೆ. ವೈದ್ಯರು ನರ್ಸ್ ಗಳ ಶ್ರಮದಿಂದ ಕೊರೋನಾ ವಿರುದ್ಧ ಹೋರಾಟ ಮಾಡಲಾಗಿದೆ,ಕೊರೋನಾಗೆ ಬಲಿಯಾದ ವಾರಿಯರ್ಸ್ ಗೆ ಸರ್ಕಾರದಿಂದ 30 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಸಂಕಷ್ಟದಲ್ಲಿದ್ದ ಜನರಿಗೆ ಸರ್ಕಾರ ಪರಿಹಾರದ ವ್ಯವಸ್ಥೆ ಮಾಡಿದೆ ಎಂದರು.

ವೈದ್ಯಕೀಯ ಕ್ಷೇತ್ರದಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದ ಆಸ್ಪತ್ರೆಗಳಯ ಸಾಕಷ್ಟು ಅಭಿವೃದ್ದಿಯಾಗಿವೆ.  ರಾಜ್ಯದಲ್ಲಿ ಉದ್ಯೋಗ ಸೃಷ್ಠಿ ಪ್ರಮಾಣ ಹೆಚ್ಚಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ಮುಂದಿದೆ ಎಂದು ಸರ್ಕಾರದ ಸಾಧನೆ ಶ್ಲಾಘಿಸಿದರು.

ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕೆ ಸಾಕಷ್ಟು ಕ್ರಮಗಳನ್ನ ಕೈಗೊಂಡಿದೆ. ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ ಯೋಜನೆಯಲನ್ನ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದೆ.  ಈ ನಡುವೆ ರಾಜ್ಯದಲ್ಲಿ ಫಸಲಿನ ಪ್ರಮಾಣ ಹೆಚ್ಚಾಗಿದೆ. ಈ ಮೂಲಕ ಕೃಷಿ ಕ್ಷೇತ್ರದಲ್ಲಿ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.

ರಾಜ್ಯಪಾಲರ ಭಾಷಣದ ಮುಖ್ಯಾಂಶ ಇಲ್ಲಿದೆ  

1.26 ಲಕ್ಷ ಜನರಿಗೆ ಕೊರೋನಾ ಸಂದರ್ಭದಲ್ಲಿ ಉಚಿತ ಚಿಕಿತ್ಸೆ ನೀಡಲಾಗಿದೆ. 325 ಕೋಟಿ ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ಆತ್ಮನಿರ್ನರ ಭಾರತ ನಿರ್ಮಾಣಕ್ಕೆ ಕರ್ನಾಟಕ ಸಾಕಷ್ಟು ಕೊಡುಗೆ ನೀಡಿದೆ.   ಹಾಲು ಉತ್ಪಾದನೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.  ಬೇಳೆಕಾಳು ಉತ್ಪಾದನೆಯಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದೇವೆ. ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬಡವರಿಗೆ ಸೂರು ಕಲ್ಪಿಸುವ ಕಾರ್ಯ ನಡೆಯುತ್ತಿದೆ ಎಂದರು.state-successful-fight-against-corona-governor-vajubhai-walas-speech-addressing-joint-session

2,848 ಕೋಟಿ ರೂಪಾಯಿಯಲ್ಲಿ ರಾಜ್ಯದಲ್ಲಿ ನೀರು ಸರಬರಾಜು ವ್ಯವಸ್ಥೆಯ ಯೋಜನೆ ಕೈಗೊಳ್ಳಲಾಗಿದೆ. ಕಲಬುರ್ಗಿಯಲ್ಲಿ 300 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ. ಬೆಂಗಳೂರು ಮೆಟ್ರೋ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಮೆಟ್ರೋ 2ನೇ ಹಂತ, 2ಎ ಹಂತದಲ್ಲಿ ಕಾಮಗಾರಿ ಚಾಲನೆಯಲ್ಲಿದೆ.

1,103 ಕೋಟಿ ವೆಚ್ಚದಲ್ಲಿ 24 ಒಳ ಚರಂಡಿ ಯೋಜನೆಗಳಿಗೆ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಮಿಷನ್ – 2022 ಜಾರಿ. ಜನರ ಜೀವನ ಉತ್ತಮಗೊಳಿಸಲು ಬೆಂಗಳೂರು ಮಿಷನ್ ಜಾರಿಗೊಳಿಸಲಾಗುತ್ತಿದೆ. ಅನುಭವ ಮಂಟಪ ನಿರ್ಮಾಣಕ್ಕಾಗಿ 600 ಕೋಟಿ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 300 ಕೋಟಿ ನೀಡಲಾಗಿದೆ  ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ತಿಳಿಸಿದರು.

ENGLISH SUMMARY….

State Govt. successful in fighting against Corona – Governor Vajubhai Vala addresses joint session
Bengaluru, Jan. 28, 2021 (www.justkannada.in): “The people of the state have fought against Corona pandemic, and the Government of Karnataka is successful in fighting against the pandemic,” opined Hon’ble Governor of Karnataka Sri Vajubhai Vala.state-successful-fight-against-corona-governor-vajubhai-walas-speech-addressing-joint-session
The Karnataka Assembly Session started today. Governor Vajubhai Vala addressed the joint session on the first day today. In his address, he said, “the State Government is successful in the fight against Corona, and the people of the State have followed the guidelines of the government properly. The contribution of doctors and nurses in the fight against the pandemic is immense, and the government has announced a sum of Rs. 30 lakh each for corona warriors who have sacrificed their lives,” he said.
Keywords: Governor address joint session/ Karnataka Assembly Session begins/ Corona pandemic

Key words: state -successful –fight- against -Corona- Governor -Vajubhai Wala’s- speech -addressing – joint session