ಬೆಂಗಳೂರು, ಮೇ 22, 2022 (www.justkannada.in): ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.
ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಬಸವರಾಜ ಬೊಮ್ಮಾಯಿ ಎಂದಿದ್ದಾರೆ.