ಬೆಂಗಳೂರು,ಜ,5,2020(www.justkannada.in): ಕನಕಪುರದ ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕ್ರೈಸ್ತ ನಿಯೋಗ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿತು.
ಕಪಾಲಿ ಬೆಟ್ಟದಲ್ಲಿ ಏಸು ಕ್ರಿಸ್ತ ಪ್ರತಿಮೆಯನ್ನು ನಿರ್ಮಾಣ ಮಾಡಲು ಅವಕಾಶ ನೀಡಬೇಕು ಎಂದು ಕ್ರೈಸ್ತ ನಿಯೋಗ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕ್ರೈಸ್ತ ಮುಖಂಡ ಪೀಟರ್ ಮಚಾದೋ, ‘ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ. ಸುಮಾರು ವರ್ಷಗಳಿಂದಲೂ ಕ್ರೈಸ್ತ ಸಮುದಾಯದವರು ಈ ಜಾಗದಲ್ಲಿ ಯೇಸುವನ್ನು ಪೂಜಿಸುತ್ತಿದ್ದೇವೆ. ಇದೇ ಜಾಗದಲ್ಲಿ ಇದೀಗ ಏಸು ಪ್ರತಿಮೆ ನಿರ್ಮಾಣವಾಗುತ್ತಿದೆ. ಇದಕ್ಕೆ ವಿರೋಧ ಬೇಡ ಎಂದು ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದೇವೆ ಎಂದರು.
ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. ಇದಕ್ಕೆ ಹಲವು ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದರು. ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ಮುಂದಾಗಿದ್ದು ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಕಾರ್ಯ ಸ್ಥಗಿತವಾಗಿದೆ.
Key words: statue- Jesus -Christian delegation – met – requested- CM BS yeddyurappa