ಶಿವಮೊಗ್ಗ,ಫೆಬ್ರವರಿ,25,2023(www.justkannada.in): 7ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 1 ರಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್ ಷಡಕ್ಷರಿ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಎನ್ ಷಡಕ್ಷರಿ, ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡುತ್ತೇವೆ. ಬಜೆಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉದಾಸೀನತೆ ತೋರಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲಿದ್ದಾರೆ ಎಂದು ಹೇಳಿದರು.
ಸರ್ಕಾರ ಕೂಡಲೇ 7ನೇ ವೇತನ ಆಯೋಗ ಜಾರಿ ಮಾಡಬೇಕು. ಆಗ ಮಾತ್ರ ನಮ್ಮ ಹೋರಾಟ ವಾಪಸ್ ಪಡೆಯುತ್ತೇವೆ ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ. ಇನ್ನೂ 3-4 ದಿನ ಸಮಯವಿದೆ, ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಸಿ.ಎನ್ ಷಡಕ್ಷರಿ ಹೇಳಿದರು.
Key words: strike – government -employees – March 1- CS Shadakshari