ಬೆಂಗಳೂರು,ಮಾರ್ಚ್,31,2021(www.justkannada.in): ಬೇಡಿಕೆಗಳು ಈಡೇರದ ಹಿನ್ನೆಲೆ ಏಪ್ರಿಲ್ 7 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಾಗಿ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವವರಿಗೆ ವೇತನ ಕಡಿತದ ಎಚ್ಚರಿಕೆಯನ್ನ ರಾಜ್ಯ ಸರ್ಕಾರ ನೀಡಿದೆ.
ಸಾರಿಗೆ ನೌಕರರು ಮುಂದಿಟ್ಟಿದ್ದ 9 ಬೇಡಿಕೆಗಳನ್ನ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಸರ್ಕಾರ ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ.
ರಾಜ್ಯ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದು, ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದಿನಿಂದ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕಡಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮಗಳು, ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013 ರ ಅಡಿ ಬರುವುದರಿಂದ ರಾಜ್ಯ ಸರ್ಕಾರದ ಅಧಿಸೂಚನೆ ಅನ್ವಯ ಮುಷ್ಕರ ನಿರ್ಬಂಧಿಸಲಾಗಿದೆ. ಹೀಗಾಗಿ ಸಂಸ್ಥೆಯ ನೌಕರರು ಮುಷ್ಕರ ಮಾಡುವಂತಿಲ್ಲ ಎಂದು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ನಿರ್ದೇಶನ ನೀಡಿದ್ದಾರೆ.
Key words: Strike – transport -employees –april 7-government – warning