ಬೆಂಗಳೂರು,ಜು,7,2020(www.justkannada.in): ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ಆಗ್ರಹಿಸಿದ್ದಾರೆ.
ಕರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಿಡಿಕಾರಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿಎಸ್ ವೈಗೆ ಒತ್ತಾಯಿಸಿದ್ದಾರೆ.
ಪ್ರಸ್ತುತ ಕೋವಿಡ್- 19 ಗೆ ಒಳಪಡಿಸುತ್ತಿರುವ ಪರೀಕ್ಷಾ ಸಾಮರ್ಥ್ಯ ವಿರುದ್ಧವೂ ಅಸಮಾಧಾನ ಹೊರ ಹಾಕಿರುವ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಒಟ್ಟು 59 ಪರೀಕ್ಷಾ ಕೇಂದ್ರಗಳಿವೆ. ಅವುಗಳ ಪರೀಕ್ಷಾ ಸಾಮರ್ಥ್ಯ 31116. ಆದರೆ ಈಗ ಪ್ರತಿ ದಿನ ನಡೆಯುತ್ತಿರುವುದು ಕೇವಲ 13910 ಮಾತ್ರ. ಸರ್ಕಾರದ ಅಯೋಗ್ಯತೆಗೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಸಿಎಂ ಬಿಎಸ್ ವೈ ಗೆ ಪ್ರಶ್ನೆ ಹಾಕಿದ್ದಾರೆ.
ಹಾಗೆಯೇ ಪರೀಕ್ಷಾ ಸಾಮರ್ಥ್ಯ ಹೆಚ್ಚಾದರೆ ಸೋಂಕಿತರು ಸಂಖ್ಯೆಯೂ ಜಾಸ್ತಿಯಾಗುತ್ತದೆ. ಆಗ ಅದೇ ಪ್ರಮಾಣದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ. ಜನರ ಸಾವಿಗೆ ಕಾರಣವಾದ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದು ಕರೆದರೆ ತಪ್ಪೇ..? ಎಂದು ಸಿದ್ಧರಾಮಯ್ಯ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
Key words: stringent -action –against- private hospitals -refuse – treat-former CM-Siddaramaiah