ಮಂಡ್ಯ,ಡಿಸೆಂಬರ್,21,2024 (www.justkannada.in): ಈಗಷ್ಟೇ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರು ಬಳಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾದ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತ ಸಂಭವಿಸಿದ್ದು ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬೋಸೇಗೌಡನ ದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ್ ಮೃತ ವಿದ್ಯಾರ್ಥಿಗಳು. ಪೃಥ್ವಿ ಎಂಬ ಮತ್ತೊಬ್ಬ ವಿದ್ಯರ್ಥಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಮೈಸೂರು ಜಿಲ್ಲೆ ತಲಕಾಡು ಪ್ರವಾಸಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಬಸ್ ಓವರ್ ಟೇಕ್ ಮಾಡುವಾಗ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಮೃತದೇಹಗಳನ್ನ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Key words: Lorry, collision, Three students, death