ಬಳ್ಳಾರಿ, ಮೇ 07, 2019 : (www.justkannada.in news) : ಹಾಸ್ಟೆಲ್ ನಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡ 40 ಕ್ಕೂ ಹೆಚ್ಚು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯರೇ ಹಾಸ್ಟೆಲ್ ಊಟದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವವರು.
ಈ ಪೈಕಿ ಆರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರನ್ನು ಕಮಲಾಪುರ ಹಾಗೂ ಹೊಸಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
students got admitted into a govt hospital in bellary district because of food poisoning. Students are from Hampi university. Students had lunch at the hostel mess and fell sick and were admitted to the hospital in the night. 20 discharged as of now
40 students of Hampi Kannada University fell sick after consuming dinner from the University. 6 students are reportedly in a critical condition. Students were shifted to a govt hospital in Kamalapura and Hosapete.