ವಿದ್ಯಾರ್ಥಿಗಳು ಓದಿನ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಬೇಕು- ಡಾ.ಎಚ್.ಎನ್.ಸುಬ್ರಮಣ್ಯ ಕರೆ

ಬೆಂಗಳೂರು, ಜುಲೈ, 15,2024 (www.justkannada.in):   ಜಯನಗರ ನ್ಯಾಷನಲ್ ಕಾಲೇಜಿನಲ್ಲಿ  59ನೇ ವಾರ್ಷಿಕ ಅಂತರ ಕಾಲೇಜು ಕ್ರೀಡಾಕೂಟ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಕಾಲೇಜಿನ ಮಾಜಿ ದೈಹಿಕ ಶಿಕ್ಷಣ ನಿರ್ದೇಶಕ  ಪ್ರೊ. ಹೇಮಂತ್ ರೆಡ್ಡಿ  ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದರು.

ಎನ್ ಇಎಸ್ ಅಧ್ಯಕ್ಷರಾದ ಡಾ.ಎಚ್.ಎನ್.ಸುಬ್ರಮಣ್ಯ ಮಾತನಾಡಿ,  ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಬೇಕು, ಇದು ಮಾನಸಿಕ ಹಾಗೂ ದೈಹಿಕ ಸಧೃಢತೆಗೆ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕ್ರೀಡಾಕೂಟದ ವಿವಿಧ ವಿಭಾಗಗಳಲ್ಲಿ  ವಿದ್ಯಾರ್ಥಿಗಳು ಭಾಗವಹಿಸಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಎನ್. ಇ ಎಸ್.ಕಾರ್ಯದರ್ಶಿಗಳಾದ ವಿ.ವೆಂಕಟಾಶಿವಾರೆಡ್ಡಿ , ಚೇರ್ಮನ್ ಡಾ. ಪಿ.ಎಲ್.ವೆಂಕಟರಾಮ ರೆಡ್ಡಿ, ಪ್ರಾಂಶುಪಾಲರಾದ ಡಾ. ಪಿ.ಎಲ್.ರಮೇಶ್, ಕಾಲೇಜು ಕೌನ್ಸಿಲ್ ಕಾರ್ಯದರ್ಶಿ ಪ್ರೊ.ಚೆಲುವಪ್ಪ, ಪ್ರೊ.ಮಮತಾ, ದೈಹಿಕ ಶಿಕ್ಷಣ ನಿರ್ದೇಶಕರಾದ ತೌಸಿಫ್ ಅಹಮದ್ ಸೇರಿದಂತೆ ಅಧ್ಯಾಪಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Key words: Students, involved, sports, studies – Dr. H.N. Subramanya