ಬೆಂಗಳೂರು, ಮೇ 6,2019(www.justkannada.in): ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬವಾಗಿ ಬಂದ ಹಿನ್ನೆಲೆ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ರಾಜ್ಯ ಮುಖ್ಯಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಮಾನವ ಸಂಪನ್ಮೂಲ ಇಲಾಖೆಗೆ ಮನವಿ ಮಾಡಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆಯಂತೆ ರಾಜ್ಯದ ಮುಖ್ಯಕಾರ್ಯದರ್ಶಿ ವಿಜಯ್‍ಭಾಸ್ಕರ್ ಅವರು ಮಾನವ ಸಂಪನ್ಮೂಲ ಇಲಾಖೆ ಜತೆ ಮಾತುಕತೆ ನಡೆಸಿ ಚರ್ಚಿಸಿದ್ದಾರೆ. ಈ ವೇಳೆ ಅವಕಾಶದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.
ರಾಜ್ಯಸರ್ಕಾರ ವತಿಯಿಂದ ಸಿಎಸ್ ವಿಜಯ್ ಶಂಕರ್ ಮಾಡಿದ ಮನವಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸಕಾರಾತ್ಮಕ ಸ್ಪಂದಿಸಿದೆ. ಈ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಭರವಸೆ ನೀಡಿದೆ.
ಸುಮಾರು 500 ವಿದ್ಯಾರ್ಥಿಗಳು ಹಂಪಿ ಎಕ್ಸಪ್ರೆಸ್ ರೈಲು 6 ಗಂಟೆ ತಡವಾಗಿ ಬಂದಿದ್ದರಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಅವಕಾಶ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ರಾಜ್ಯಸರ್ಕಾರದಿಂದ ಮನವಿ ಮಾಡಿದೆ.
Key words: students- missed – NEET- exam- CS- TM Vijay Bhaskar -discussed – HRD department.