ಬೆಂಗಳೂರು,ಜು,31,2020(www.justkannada.in): ಹಾಸನ ಜಿಲ್ಲೆ ಚೆನ್ನರಾಯಪಟ್ಟಣ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಕಿರಣ್ ಆತ್ಮಹತ್ಯೆ ಪ್ರಕರಣ ಕುರಿತು ಸಂಪೂರ್ಣ ತನಿಖೆ ಆಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಕ್ಕೆ ಹಿಂಸೆ ಕೊಟ್ಟಿದ್ದಾರೆ ಅಂತ ಹೇಳುತ್ತಿದ್ದಾರೆ. ಗೃಹ ಸಚಿವರು ಇದರ ಬಗ್ಗೆ ಸೂಕ್ತ ತನಿಖೆ ಮಾಡಬೇಕು. ಇದನ್ನು ಸರ್ಕಾರ ಸರಿಯಾದ ತನಿಖೆ ಮಾಡದೇ ಹೋದ್ರೆ ಸರ್ಕಾರದ ವಿರುದ್ದ ಹೋರಾಟ ಮಾಡಬೇಕಾಗುತ್ತೆ. ಗೃಹ ಸಚಿವರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ಸದಸ್ಯರನ್ನ ಡಿ.ಕೆ ಬ್ರದರ್ಸ್ ಸೆಳೆಯುತ್ತಿದ್ದಾರೆಂಬ ಸಿಪಿ ಯೋಗೇಶ್ವರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ದೇವೇಗೌಡರು, ಜೆಡಿಎಸ್ ಕಾರ್ಯಕರ್ತರನ್ನ ಡಿಕೆ ಬ್ರದರ್ಸ್ ಕಾಂಗ್ರೆಸ್ ಸೆಳೆಯುತ್ತಾರೆಂಬ ವಿಚಾರಕ್ಕೆ ನಾನು ಊಹಾಪೋಹದ ಮಾತುಗಳಿಗೆ ಉತ್ತರ ನೀಡಲ್ಲ. ನನಗು ಸಾಕಷ್ಟು ರಾಜಕೀಯ ಅನುಭವ ಇದೆ. ಏನು ನಡೆಯುತ್ತಿದೆ ಎಲ್ಲವೂ ಗೊತ್ತಿದೆ. ಅವರ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರೋದಾದರೆ ಬನ್ನಿ ಎಂದಿದ್ದಾರೆ. ಸೂಕ್ತ ಸಂದರ್ಭದಲ್ಲಿ ಈ ಬಗ್ಗೆ ನಾನು ಮಾತನಾಡುತ್ತೇನೆ. ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
Key words: Sub Inspector – Suicide Case-Former Prime Minister -HD Deve Gowda – investigation