ರಾಯಚೂರು,ಆ,1,2020(www.justkannada.in): ರಾಜ್ಯದಲ್ಲಿ ತಾಂಡವಾಡುತ್ತಿರುವ ಮಹಾಮಾರಿ ಕೊರೋನಾಗೆ ಸಬ್ ರಿಜಿಸ್ಟ್ರಾರ್ ಬಲಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಮಾನ್ವಿಯ ಸಬ್ ರಿಜಿಸ್ಟ್ರಾರ್ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು, ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಸಹ ಆಘಾತಕ್ಕೊಳಗಾಗಿ ಪ್ರಾಣ ಬಿಟ್ಟಿರುವ ಮನಕಲಕುವ ಘಟನೆ ನಡೆದಿದೆ.
ಇತ್ತೀಚೆಗೆ ಸಬ್ ರಿಜಿಸ್ಟ್ರಾರ್ಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಕೂಡಲೇ ಅವರನ್ನು ರಾಯಚೂರಿನ ಓಪೆಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಉಸಿರಾಟದ ಸಮಸ್ಯೆ ತೀವ್ರವಾಗಿದ್ದರಿಂದ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ ಸಬ್ ರಿಜಿಸ್ಟ್ರಾರ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು , ಮಗನ ಸಾವಿನ ಸುದ್ದಿ ಕೇಳಿದ ಸಬ್ ರಿಜಿಸ್ಟ್ರಾರ್ ತಾಯಿಗೆ ಆಘಾತವಾಗಿದ್ದು, ಅವರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಮೃತ ಸಬ್ ರಿಜಿಸ್ಟ್ರಾರ್ರ ಅಣ್ಣನಿಗೂ ಕರೊನಾ ಪಾಸಿಟಿವ್ ದೃಢಪಟ್ಟಿದ್ದು, ಹೈದ್ರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Key words: Sub Registrar- death-Corona-raichur