ಮೈಸೂರು,ಆ,27,2019(www.justkannada.in): ಮೈಸೂರು ಮಹಾನಗರ ಪಾಲಿಕೆಯಲ್ಲಿ ಹವಾನಿಯಂತ್ರಣ ಯಂತ್ರ(ಎಸಿ) ಯಲ್ಲಿ ದಿಢೀರನೇ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಮೈಸೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಕಚೇರಿಯಲ್ಲಿರುವ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಭೆ ನಡೆಯುತ್ತಿದ್ದ ವೇಳೆಯೇ ಈ ಅವಘಡ ಸಂಭವಿಸಿದ್ದು, ಕೂಡಲೇ ಸಿಬ್ಬಂದಿಗಳು ಸಭೆಯಿಂದ ಹೊರಬಂದಿದ್ದಾರೆ. ಬೆಂಕಿಯ ರಭಸಕ್ಕೆ ಎಸಿ ಯಂತ್ರ ಸ್ಪೋಟಗೊಂಡಿದ್ದು ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ
ಇನ್ನು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು , ಅವಘಡ ಸಂಭವಿಸಿದ ಹಿನ್ನೆಲೆ ಪಾಲಿಕೆಗೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಯಿತು.
Key words: sudden- fire – AC – Mysore –city corporation