ಬೆಂಗಳೂರು, ಜೂನ್ 14, 2022 (www.justkannada.in): ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಶೂಟಿಂಗ್ನಲ್ಲಿದ್ದಾಗ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ದೀಪಿಕಾ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ ಎಂಬುದು ಖಚಿತವಾದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೀಗ ಶೂಟಿಂಗ್ನಲ್ಲಿ ಮತ್ತೆ ತೊಡಗಿಸಿಕೊಂಡಿದ್ದಾರೆ.
ದೀಪಿಕಾ ಪಡುಕೋಣೆಗೆ ಕೊಂಚ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ತನ್ನ ಹೃದಯದ ಬಡಿತವು ಏರುಪೇರಾಗುತ್ತಿದೆ ಎಂದು ಅವರಿಗೆ ಅನಿಸತೊಡಗಿತ್ತು ಎನ್ನಲಾಗಿದೆ.
ಆದರೆ ದೀಪಿಕಾ ಪಡುಕೋಣೆ ಅವರ ತಂಡದಿಂದ ಇದುವರೆಗೆ ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಹೊರಬಿದ್ದಿಲ್ಲ.