ಇಬ್ಬರು ಮಕ್ಕಳಿಗೆ ವಿಷ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಸ್ಥಿತಿ ಗಂಭೀರ

ಧಾರವಾಡ,ಏಪ್ರಿಲ್,12,2025 (www.justkannada.in): ತಾಯಿ ತನ್ನ ಇಬ್ಬರು ಮಕ್ಕಳಿಗೆ ವಿಷ ಹಾಕಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ನಡೆದಿದೆ.

ತಾಯಿ ಮಾಲಾಂಬಿ (29) ಮಕ್ಕಳಾದ ಫಯಾಜ್ (8) ಆರೀಫ್ (9)  ಇಬ್ಬರಿಗೆ ವಿಷ ಹಾಕಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ವಿಷ ಸೇವಿಸಿದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತಾಯಿ ಮಾಲಾಂಬಿ (29) ಅಪಾಯದಿಂದ ಪಾರಾಗಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿದ್ದು, ಬಳಿಕ ತಾನೂ ಕೂಡ ವಿಷ ಮಿಶ್ರಿತ ಅನ್ನವನ್ನು ಸೇವಿಸಿದ್ದಾರೆ ಎನ್ನಲಾಗಿದೆ.

Key words: Mother, attempts, suicide, poisoning, two children