ನವದೆಹಲಿ, ಮಾರ್ಚ್,24,2025 (www.justkannada.in): ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಿನಯ್ ಕುಮಾರ್ ಸಿಂಗ್ ಅನ್ನೋರಿಂದ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ . ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಪ್ರಸ್ತಾಪವಾಗಿದೆ. ಸ್ವತಃ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ . ಸಾರ್ವಜನಿಕ ವಿಶ್ವಾಸ ಕಾಪಾಡಲು ತನಿಖೆ ನಡೆಸಬೇಕು. ಕೋರ್ಟ್ ನಿಗಾದಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.
Key words: Honeytrap case, PIL, Supreme Court