ನಟ ದರ್ಶನ್ ಗೆ  ಜಾಮೀನು ಮಂಜೂರು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆ

ನವದೆಹಲಿ,ಏಪ್ರಿಲ್,2,2025 (www.justkannada.in):  ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ  ನಡೆಸಲಿದೆ.

ಪ್ರಕರಣ ಸಂಬಂಧ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೇಶ್, ನಾಗರಾಜು, ಅನುಕುಮಾ‌ರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದರೇ ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ವಕೀಲ ಅನಿಲ್ ನಿಶಾನಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿ-ವಾಲಾ ಹಾಗೂ ಆ‌ರ್. ಮಹದೇವನ್ ದ್ವಿಸದಸ್ಯ ಪೀಠದೆದುರು ಮಂಗಳವಾರ ಪ್ರಸ್ತಾಪಿಸಿದರು. ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ನ್ಯಾಯಪೀಠವು ತಿಳಿಸಿದ್ದು  ಇಂದು ಅರ್ಜಿ ವಿಚಾರಣೆ ನಡೆಯಲಿದೆ.

Key words: petition, challenging,  actor, Darshan, bail,  hearing, Supreme court