ನವದೆಹಲಿ,ಏಪ್ರಿಲ್,2,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ.
ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ. ಹೈಕೋರ್ಟ್ ನಟ ದರ್ಶನ್ ಗೆ ಜಾಮೀನು ಮಂಜೂರು ಮಾಡಿತ್ತು. ಕೆಲ ಆರೋಪಿಗಳಿಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಜಾಮೀನು ದೊರೆತಿತ್ತು. ರಾಜ್ಯ ಪೊಲೀಸ್ ಇಲಾಖೆಯು ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೀಗ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅದಕ್ಕೂ ಮುನ್ನ ನಟ ದರ್ಶನ್ ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದಿದ್ದರು.
Key words: Hearing, actor, Darshan, bail cancellation, petition, adjourned, Supreme court