ವಕ್ಫ್ ಆಸ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಿ- ಸುಪ್ರೀಂಕೋರ್ಟ್ ಮಧ್ಯಂತರ ಆದೇಶ

ನವದೆಹಲಿ,ಏಪ್ರಿಲ್,17,2025 (www.justkannada.in): ವಕ್ಫ್ ಆಸ್ತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಿ ಎಂದು  ಸುಪ್ರೀಂಕೋರ್ಟ್  ಮಧ್ಯಂತರ ಆದೇಶ ಹೊರಡಿಸಿದ್ದು, ಜೊತೆಗೆ ವಕ್ಫ್ ತಿದ್ದುಪಡಿ ಕಾಯ್ದೆ ಬಗ್ಗೆ ವಿವರವಾದ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ 1 ವಾರ ಗಡುವು ನೀಡಿದೆ.

ವಕ್ಫ್​ ತಿದ್ದುಪಡಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆೈ ಸಂಜೀವ್ ಖನ್ನಾ ನೇತೃತ್ವದ ಪೀಠ ಈ ಮಧ್ಯಂತರ ಆದೇಶ ಹೊರಡಿಸಿದೆ.

ಆಸ್ತಿಗಳ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು 1 ವಾರದೊಳಗೆ ಉತ್ತರಿಸಬೇಕು. ಹೊಸ ನೇಮಕಾತಿ ಮಾಡದಂತೆ ಕೇಂದ್ರ ಸರ್ಕಾರ ಭರವಸೆ ನೀಡಬೇಕು ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆಯನ್ನ ಮೇ 5ಕ್ಕೆ ಮುಂದೂಡಿಕೆ ಮಾಡಿದೆ.

Key words: Waqf Amendment Act, Central Government, Supreme Court