ನವದೆಹಲಿ,ಜುಲೈ,21,2023(www.justkannada.in): ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದ್ದ ಗುಜರಾತ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ಆಗಸ್ಟ್ 4ಕ್ಕೆ ಮುಂದೂಡಿಕೆ ಮಾಡಿದೆ.
ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ನೀಡಿತ್ತು, ಆದರೆ ರಾಹುಲ್ ಗಾಂಧಿ ಈ ಶಿಕ್ಷೆಯನ್ನು ತಡೆಯುವಂತೆ ಗುಜರಾತ್ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ್ದ ಗುಜರಾತ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು. ಸುಪ್ರೀಂ ಅವರ ಅರ್ಜಿಯನ್ನು ವಿಚಾರಣೆ ಮಾಡುವುದಾಗಿ ಜುಲೈ 18ರಂದು ಒಪ್ಪಿಗೆ ನೀಡಿತ್ತು, ಆದರೆ ಸುಪ್ರೀಂ ಇಂದು ಈ ವಿಚಾರಣೆಯನ್ನು ಆ.4ಕ್ಕೆ ಸುಪ್ರೀಂ ಮುಂದೂಡಿದೆ.
ಪ್ರಕರಣ ಸಂಬಂಧ ಗುಜರಾತ್ ಸರ್ಕಾರ ಮತ್ತು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು, 10 ದಿನದ ಒಳಗೆ ಉತ್ತರ ನೀಡುವಂತೆ ತಿಳಿಸಿದೆ.
Key words: Supreme Court -adjourned -hearing – Rahul Gandhi- appeal.