ನವದೆಹಲಿ,ಸೆ,23,2019(www.justkannada.in): ಸ್ಪೀಕರ್ ನೀಡಿದ್ದ ಅನರ್ಹತೆ ಆದೇಶ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಎನ್.ವಿ ರಮಣ ಅವರ ನೇತೃತ್ವದ ತ್ರಿಸದಸ್ಯಪೀಠದಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯುತ್ತಿದ್ದು ವಿಚಾರಣೆಯನ್ನ ಸೆಪ್ಟಂಬರ್ 25ಕ್ಕೆ ಮುಂದೂಡಲಾಗಿದೆ. ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ಅನರ್ಹ ಶಾಸಕರ ಪರ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ಬಳಿಕ ಅರ್ಜಿ ವಿಚಾರಣೆಯನ್ನ ಮುಂದಿನವಾರಕ್ಕೆ ಮುಂದೂಡುವಂತೆ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದರು.
ಈ ನಡುವೆ ಇದೇ ವೇಳೆ ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಅಕ್ಷೇಪವಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಚುನಾವಣಾ ಆಯೋಗ ತನ್ನ ಅಭಿಪ್ರಾಯ ತಿಳಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಪಿಲ್ ಸಿಬಲ್, ನಿಮ್ಮ ಅಭಿಪ್ರಾಯವನ್ನ ಇಲ್ಲಿ ಕೇಳಿಲ್ಲ. ನೀವು ಸ್ವಯಂಪ್ರೇರಿತವಾಗಿ ಅಭಿಪ್ರಾಯ ತಿಳಿಸುವಂತಿಲ್ಲ ಎಂದರು.
ಇಬ್ಬರು ‘ಕೈ’ ನಾಯರು ಮತ್ತು ಸ್ಪೀಕರ್ ಕಚೇರಿಗೆ ನೋಟೀಸ್..
ಅನರ್ಹ ಶಾಸಕರ ಅರ್ಜಿ ವಿಚಾರಣೆ ಸಂಬಂಧ ಕಾಂಗ್ರೆಸ್ ಇಬ್ಬರು ನಾಯಕರಿಗೆ ಸುಪ್ರಿಂಕೋರ್ಟ್ ನೀಡಿದೆ. ಪ್ರತಿವಾದಿಯನ್ನಾಗಲು ಕೇವಿಯಟ್ ಸಲ್ಲಿಸಿದ್ದ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ಧರಾಮಯ್ಯಗೆ ಸುಪ್ರೀಂಕೋರ್ಟ್ ನೋಟೀಸ್ ನೀಡಿದೆ. ಅಲ್ಲದೆ ಸ್ಪೀಕರ್ ಕಚೇರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರಿಗೂ ನೋಟೀಸ್ ಜಾರಿ ಮಾಡಲಾಗಿದೆ.
Key words: supreme court-Adjournment -hearing –disqualidied MLA-petition- September 25.