ನವದೆಹಲಿ, ನವೆಂಬರ್ 09, 2019 (www.justkannada.in): ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಐತಿಹಾಸಿಕ ಅಯೋಧ್ಯಾ ತೀರ್ಪು ಓದುತ್ತಿದ್ದಾರೆ.
2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. ಇನ್ನು 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿತ್ತು.
ಈ ಅರ್ಜಿ ವಿಚಾರಣೆ ಅಂತಿಮ ವಿಚಾರಣೆ ಮುಗಿದಿದ್ದು, ತೀರ್ಪು ನವೆಂಬರ್ 09 ಶನಿವಾರ ಬೆಳಿಗ್ಗೆ 9:30 ಕ್ಕೆ ಹೊರಬೀಳಬೇಕಿದೆ. ಸರ್ವಾನುಮತದ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ.