ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ,ಜುಲೈ,15,2024 (www.justkannada.in): ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.  ಡಿಸಿಎಂ ಡಿ.ಕೆ.ಶಿವಕುಮಾಮಾರ್‌ ಅವರು, ಹೈಕೋರ್ಟ್‌ ಆದೇಶ ಪ್ರಶ್ನಿಸಿ, ಪ್ರಕರಣ ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್‌ ಇದೀಗ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಸಿಬಿಐ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು.  2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.

Key words: Supreme Court, dismisses, DK Shivakumar, petition