ನವದೆಹಲಿ,ಮಾರ್ಚ್,2,2023(www.justkannada.in): ಚುನಾವಣಾ ಆಯುಕ್ತರ ನೇಮಕಕ್ಕೆ ಮೂವರು ಸದಸ್ಯರನ್ನೊಳಗೊಂಡ ಹೊಸ ಸಮಿತಿಯನ್ನ ಸುಪ್ರೀಂಕೋರ್ಟ್ ರಚಿಸಿದೆ.
ಹೊಸ ಸಮಿತಿಯಲ್ಲಿ ಪ್ರಧಾನಿ, ಭಾರತದ ಮುಖ್ಯ ನ್ಯಾಯಮೂರ್ತಿಗಳು ಮತ್ತು ವಿರೋಧ ಪಕ್ಷದ ನಾಯಕರು ಇರುತ್ತಾರೆ. ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಈ ತೀರ್ಪು ನೀಡಿದೆ.
ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಸಾಂವಿಧಾನಿಕ ಪೀಠವು ಈ ನೇಮಕಾತಿಗಳಿಗೆ ಸಂಸತ್ತು ಕಾನೂನು ರಚಿಸುವವರೆಗೆ ಈ ನಿಯಮವು ಮುಂದುವರಿಯುತ್ತದೆ ಎಂದು ಹೇಳಿದೆ.
Key words: Supreme Court -formed – new committee – appointment – Election Commissioner.