ಬೆಂಗಳೂರು,ಜೂ,17,2020(www.justkannada.in): ಕೊರೋನಾ ಹಿನ್ನೆಲೆ ರಾಜ್ಯದಲ್ಲಿ ಎಸ್ ಎಸ್ ಎಲ್ ಪರೀಕ್ಷೆ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ಕೊರೋನಾ ಹಾವಳಿ ಹಿನ್ನೆಲೆ ರಾಜ್ಯದಲ್ಲಿ ಪರೀಕ್ಷೆ ನಡೆಸದಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಡೆ ನೀಡಲು ನಿರಾಕರಿಸಿ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಂಡು ಪರೀಕ್ಷೆ ನಡೆಸುವಂತೆ ರಾಜ್ಯಸರ್ಕಾರಕ್ಕೆ ಸೂಚನೆ ನೀಡಿತ್ತು.
ನಂತರ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ರಾಜಶ್ರೀ ನಾಗರಾಜ್ ಎಂಬುವವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನ ಎತ್ತಿಹಿಡಿದಿದೆ. ಅರ್ಜಿಯನ್ನ ವಜಾಗೊಳಿಸಿರುವ ಸುಪ್ರೀಂಕೋರ್ಟ್ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.
Key words: Supreme Court -Green Signal –SSLC- examination -State.