ನವದೆಹಲಿ,ಫೆಬ್ರವರಿ,10,2022(www.justkannada.in): ರಾಜ್ಯದಲ್ಲಿ ಸದ್ಧು ಮಾಡುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಹಿಜಾಬ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಹಿಜಾಬ್ ವಿವಾರದದಲ್ಲಿ ಮಧ್ಯಪ್ರವೇಶ ಮತ್ತು ತ್ವರಿತ ವಿಚಾರಣೆ ನಡೆಸುವಂತೆ ಕೋರಿ ಹಿರಿಯ ವಕೀಲ ಕಪಿಲ್ ಸಿಬಲ್ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿರುವ ಸುಪ್ರೀಕೋರ್ಟ್ ಮುಖ್ಯನ್ಯಾಯಮೂರ್ತಿ ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಿಸಲ್ಲ. ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ. ಸುಪ್ರೀಂಕೋರ್ಟ್ ಗೆ ಈಗಲೇ ಕೇಸ್ ವರ್ಗಾವಣೆ ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಂದು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 2.30ಕ್ಕೆ ತ್ರಿಸದಸ್ಯ ಪೀಠದಲ್ಲಿ ನಡೆಯಲಿದೆ.
Key words: Supreme Court- intervene – Hijab controversy