ನವದೆಹಲಿ,ಡಿ,18,2019(www.justkannada.in): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಸುಪ್ರೀಕೋರ್ಟ್ ನಿರಾಕರಿಸಿದ್ದು ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ 59 ಅರ್ಜಿಗಳು ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದ್ದು ಪೌರತ್ವ ತಿದ್ದು ಪಡೆಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿ ವಿಚಾರಣೆಯನ್ನ 2020 ಜನವರಿ 22ಕ್ಕೆ ಮುಂದೂಡಿದೆ. ಇನ್ನು ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿರುವ ಸುಪ್ರೀಂ ಕೋರ್ಟ್ ಜನವರಿ ಎರಡನೇ ವಾರದೊಳಗೆ ಪ್ರತಿಕ್ರಿಯೆ ನೀಡಲು ಸೂಚನೆ ನೀಡಿದೆ.
ಜನವರಿ 22ರಂದು ಎಲ್ಲಾ 59 ಅರ್ಜಿಗಳನ್ನ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಾದ್ಯಂತೆ ಪ್ರತಿಭಟನೆ ನಡೆದು ಹಿಂಸಾರೂಪಕ್ಕೆ ತಿರುಗಿತ್ತು. ಹಲವೆಡೆ ಕಲ್ಲುತೂರಾಟ ನಡೆದು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.
Key words- Supreme Court -refuse- stay-Citizenship Amendment Act-central govrnament