ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್​ ಪರೀಕ್ಷೆಗೆ ತಡೆಯಾಜ್ಞೆ ನೀಡಿದ ‘ಸುಪ್ರೀಂ ಕೋರ್ಟ್’

ಬೆಂಗಳೂರು, ಮಾರ್ಚ್,12,2024(www.justkannada.in): ರಾಜ್ಯದಲ್ಲಿ 5, 8 ಮತ್ತು 9ನೇ ತರಗತಿ ‘ಬೋರ್ಡ್​ ಪರೀಕ್ಷೆಗೆ ‘ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಇದೀಗ 5,8,9 ನೇ ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ  ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಪುರಸ್ಕರಿಸಿದ್ದು, ಪರೀಕ್ಷೆ ನಡೆಸದಂತೆ  ತಡೆ ನೀಡಿದೆ.

ಬೋರ್ಡ್ ಪರೀಕ್ಷೆ ವಿಚಾರವಾಗಿ ಸರ್ಕಾರದ ಸುತ್ತೋಲೆ ರದ್ದು ಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಇದನ್ನು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಭಾಗೀಯ ಪೀಠ ಏಕಸದಸ್ಯ ಪೀಠ ಆದೇಶ  ರದ್ದು ಮಾಡಿ ಪರೀಕ್ಷೆ ನಡೆಸಲು ಗ್ರೀನ್‌ ಸಿಗ್ನಲ್ ನೀಡಿತ್ತು. ಇದನ್ನು ಪ್ರಶ್ನಿಸಿ ರುಪ್ಸಾ ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು.

ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ.

Key words: Supreme Court -stay – state-5th, 8th and 9th– class- board exams