ಮುಂಬೈ,ಸೆಪ್ಟಂಬರ್,6,2022(www.justkannada.in): ಭಾರತದ ಮಾಜಿ ಆಟಗಾರ ಸುರೇಶ್ ರೈನಾ ಎಲ್ಲ ಮಾದರಿಯ ಕ್ರಿಕೆಟ್ ಗ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಸುರೇಶ್ ರೈನಾ , ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ . ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ . ಬಿಸಿಸಿಐ (BCCI) , ಯುಪಿ ಕ್ರಿಕೆಟ್ , ಸಿಎಸ್ಕೆ , ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ , ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,’ ಎಂದು ತಿಳಿಸಿದ್ದಾರೆ.
2020ರಲ್ಲಿ ಸ್ವಾತಂತ್ರ್ಯ ದಿನ ಆಗಸ್ಟ್ 15 ರಂದು ಭಾರತದ ಮಾಜಿ ನಾಯಕ ಎಂ.ಎಸ್ ಧೋನಿ ಜೊತೆ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ವಿದಾಯ ಘೋಷಿಸಿದ್ದರು. ಇದೀಗ ಭಾರತದ ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. ಮುಂದೆ ಸುರೇಶ್ ರೈನಾ ವಿದೇಶಿ ಲೀಗ್ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಸುಮಾರು 13 ವರ್ಷಗಳ ಕಾಲ ಅಂತರರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್, 226 ಏಕದಿನ ಪಂದ್ಯ ಹಾಗೂ 78 ಟಿ20 ಪಂದ್ಯಗಳನ್ನ ಆಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಒಬ್ಬರಾಗಿರುವ ರೈನಾರನ್ನು ಕಳೆದ ಬಾರಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೈಬಿಟ್ಟಿತ್ತು. ಹರಾಜು ಪ್ರಕ್ರಿಯೆಯಲ್ಲಿ ಅನ್ಸೋಲ್ಡ್ ಆಗಿದ್ದರು.
Key words: Suresh Raina – announced – retirement – all forms -cricket.