ಬೆಂಗಳೂರು, ನವೆಂಬರ್ 24, 2020 (www.justkannada.in): ಜಮ್ಮುಕಾಶ್ಮೀರ ಮತ್ತು ಎನ್ಸಿಆರ್ನ 34 ಸರಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಸಹಿತ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸುವ ಸಂಕಲ್ಪ ಮಾಡಿದ್ದಾರೆ ಕ್ರಿಕೆಟಿಗ ಸುರೇಶ್ ರೈನಾ.
ಸರ್ಕಾರಿ ಶಾಲೆಗಳಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕುಡಿಯುವ ನೀರು , ಬಾಲಕ ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಇನ್ನಿತರ ವ್ಯವಸ್ಥೆಗಳನ್ನು ಕಲ್ಪಿಸುತ್ತಿದ್ದಾರೆ ರೈನಾ.
ಅಂದಹಾಗೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಶುಕ್ರವಾರ 34 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಉತ್ತರಪ್ರದೇಶ ಸರಕಾರಿ ಶಾಲೆಗಳಿಗೆ ಕಾಯಕಲ್ಪ ಕಲ್ಪಿಸುತ್ತಿದ್ದಾರೆ.