ಬೆಳಗಾವಿ ಸುವರ್ಣಸೌಧದಲ್ಲಿ ಗಾಂಧೀಜಿ ಪುತ್ಥಳಿ ಅನಾವರಣ

ಬೆಳಗಾವಿ,ಜನವರಿ,21,2025 (www.justkannada.in): ಬೆಳಗಾವಿಯ ಸುವರ್ಣಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನ ಅನಾವರಣಗೊಳಿಸಿದರು.

ಇಂದು ಬೆಳಗಾವಿಯಲ್ಲಿ ಭಾರತ ಗಾಂಧಿ ಸಮಾವೇಶ ಆಯೋಜಿಸಲಾಗಿದ್ದು, ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಗಾಂಧೀಜಿ ಪುತ್ಥಳಿ ಅನಾವರಣ ಮಾಡಿದರು. ಈ ವೇಳೆ ಸಂಸದೆ ಪ್ರಿಯಾಂಕ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯುಟಿ ಖಾದರ್,  ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಪ್ರಿಯಾಂಕ್ ಖರ್ಗೆ, ಪರಮೇಶ್ವರ್, ಮತ್ತಿತರರು ಉಪಸ್ಥಿತರಿದ್ದರು.

.ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ, ಗಾಂಧಿ ಭಾರತ ಸಮಾವೇಶ ಕಾರ್ಯಕ್ರಮ ನಡೆಯುತ್ತಿದ್ದು, ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದಾರೆ.

Key words: Gandhiji statue, unveiled, Belgaum, Suvarna Soudha